ಕೀರ್ತನೆ - 2     
 
ವಂದಿಸುವುದಾದಿಯಲಿ ಗಣನಾಥನ ಸಂದೇಹ ಸಲ್ಲ ಶ್ರೀಹರಿಯಾಜ್ಞೆಯಿದಕುಂಟು ಹಿಂದೆ ರಾವಣ ತಾನು ವಂದಿಸದೆ ಗಜಮುಖನ ನಿಂದು ತಪವನು ಗೈದು ವರ ಪಡೆಯಲು ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ ತಂದ ವರಗಳನೆಲ್ಲ ಧರೆಗೆ ಇಳಿಸಿದನು ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ ಮುಂದೆ ಗಣಪನ ಪೂಜಿಸೆಂದು ಪೇಳೆ ಒಂದೆ ಮನದಲಿ ಬಂದು ಪೂಜಿಸಲು ಗಣನಾಥ ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು ಇಂದು ಜಗವೆಲ್ಲ ಉಮೆನಂದನನ ಪೂಜಿಸಲು ಚೆಂದದಿಂದಲಿ ಸಕಲಸಿದ್ಧಿಗಳನಿತ್ತು ತಂದೆ ಸಿರಿ ಪುರಂದರವಿಠಲನ ಸೇವೆಯೊಳು ಬಂದು ವಿಘ್ನವ ಕಳೆದಾನಂದವನು ಕೊಡುವ