ಈ ಪರಿಯ ಸೊಬಗಾವ ದೇವರಲಿ ನಾ ಕಾಣೆ
ಗೋಪೀಜನ ಪ್ರಿಯ ಗೋಪಾಲಗಲ್ಲದೆ
ದೊರೆಯತನದಲಿ ನೋಡೆ ಧರಣಿದೇವಿಯ ರಮಣ
ಸಿರಿಯತನದಲಿ ನೋಡೆ ಶ್ರೀಕಾಂತನು ||
ಹಿರಿಯತನದಲಿ ನೋಡೆ ಸರಸಿಜೋದ್ಭವನಯ್ಯ
ಗುರುವುತನದಲಿ ನೋಡೆ ಜಗದಾದಿ ಗುರುವು
ಪಾವನತ್ವದಿ ನೋಡೆ ಅಮರ ಗಂಗಾಜನಕ
ದೇವತ್ವದಲಿ ನೋಡೆ ದಿವಿಜರೊಡೆಯ ||
ಲಾವಣ್ಯದಲಿ ನೋಡೆ ಲೋಕಮೋಹಕನಯ್ಯ
ಆವ ಧೈಯ್ಯದಿ ನೋಡೆ ಅಸುರಾಂತಕ
ಗಗನದಲಿ ಸಂಚರಿಪ ಗರುಡದೇವನೆ ತುರಗ
ಜಗತೀಧರ ಶೇಷ ಪರಿಯಂಕ ಶಯನ ||
ನಿಗಮಗೋಚರ ಪುರಂದರ ವಿಠಲಗಲ್ಲದೆ
ಮಿಗಿಲಾದ ದೈವಗಳಿಗೀ ಭಾಗ್ಯವುಂಟೇ
Music
Courtesy:
ಸ್ಥಲ -
ಕೀರ್ತನೆ
ವಿಷಯ -
ಶ್ರೀ ಹರಿ ಸಂಕೀರ್ತನೆ