ಕೀರ್ತನೆ - 28     
 
ಹರಿನಾಮದರಗಿಣಿಯು ಹಾರುತಿದೆ ಜಗದಿ। ಪರಮ ಭಾಗವತರು ಬಲೆಯ ಬೀಸುವರು ಕೋಪವೆಂಬ ಮಾರ್ಜಾಲವು ಕಂಡರೆ ನುಂಗುವುದು । ತಾಪವೆಂಬ ಹುಲಿಯು ಕೊಂಡೊಯ್ದುದದನು || ಕಾಪಾಡಿರದನು ಹೃದಯದೊಳಗಿಂಬಿಟ್ಟು | ಅಪತ್ತಿಗೊದಗುವುದು ಈ ಮುದ್ದು ಗಿಣಿಯು ದಾರಿಯ ನಡೆವಾಗ ಚೋರರ ಭಯವಿಲ್ಲ । ಮಾರಿಬಂದರದನು ಹೊಡೆದು ನೂಕುವುದು ।। ಕ್ರೂರ ಯಮಭಟರನು ಮೂಗು ರೆಕ್ಕೆಯಲಿ ಬಡಿದು | ದಾರಿ ತೋರುವುದು ಮುರಾರಿಯ ಪಟ್ಟಣಕೆ ಎಷ್ಟೆಂದು ವರ್ಣಿಸಲಿ ಈ ಮುದ್ದು ಅರಗಿಣಿಯು | ಹೊಟ್ಟೆಯೊಳೀರೇಳು ಜಗವನಿಂಬಿಟ್ಟ ॥ ಸೃಷ್ಟೀಶ ಪುರಂದರವಿಠಲನ ನೆನೆ ನೆನೆದು | ಮುಟ್ಟಿ ಭಜಿಸುವುದು ಈ ಮುದ್ದು ಗಿಣಿಯು