ಕೀರ್ತನೆ - 48     
 
ಒಳ್ಳೆಯದೊಳ್ಳೆಯದು ಎಲ್ಲ ಸ್ಥಳವ ಬಿಟ್ಟು ಇಲ್ಲಿ ಅಡಗಿದುದು ಬಲ್ಲಿದತನವೆ ? ಬಿಡೆನೊ ಬಿಡೆನೊ ಎನ್ನ ಒಡೆಯ ತಿರುಮಲ ನಿನ್ನ | ಉಡೆಯ ಪೀತಾಂಬರ ಪಿಡಿದು ನಿಲಿಸಿಕೊಂಬೆ ಅರಿವು ಮರೆವು ಮಾಡಿ ತಿರುಗಿಸಿದೆಯಾ ಎನ್ನ । ಕೊರಳಿಗೆ ನಿನ್ನಯ ಚರಣ ಕಟ್ಟಿಕೊಂಬೆ ಅತ್ತೆಯ ಮಕ್ಕಳಿಗೆ ತೆತ್ತಿಗ ನಿನಗಾಗಿ | ವಿತ್ತದ ರಾಶಿ ತಂದಿತ್ತ ಪರಿಯಲಿ ಅತ್ತಲಿತ್ತಲಿ ನೋಡಿನ್ನೆತ್ತ ಪೋಗಲಿ ನಿನ್ನ | ಚಿತ್ತದಲ್ಲಿ ಹೊತ್ತು ಕಟ್ಟಿಕೊಂಬೆನು ಇರುಳು ಹಗಲು ಬಿಡೆದೆ ವರಪುರಂದರಗೊಲಿದೆ ! ಅರಿದು ಏನು ಇಷ್ಟು ಪುರಂದರವಿಠಲನೆ