ಕೀರ್ತನೆ - 49     
 
ನಿನ್ನ ನೋಡಿ ಧನ್ಯನಾದೆನೊ – ಹೇ ಶ್ರೀನಿವಾಸ ನಿನ್ನ ನೋಡಿ ಧನ್ಯನಾದೆ ಎನ್ನ ಮನದಿ ನಿಂತು ಸುಪ್ರ– ಸನ್ನ ದಯಮಾಡಿ ನೀನು ಮುನ್ನಿನಂತೆ ಸಲಹ ಬೇಕೋ ಲಕ್ಷ್ಮೀರಮಣ ಪಕ್ಷಿವಾಹನ ಲಕ್ಷ್ಮಿ ನಿನ್ನ ವಕ್ಷದಲ್ಲಿ ರಕ್ಷಣಶಿಕ್ಷಣದಕ್ಷ ಪಾಂಡವಪಕ್ಷ ಕಮಲಾಕ್ಷ ರಕ್ಷಿಸು ದೇಶದೇಶಗಳನು ತಿರುಗಿ ಆಶಾಬದ್ಧನಾದೆ ಸ್ವಾಮಿ ದಾಸನೆನಿಸಿ ಎನ್ನ ಜಗದೀಶ ಕಾಯೋ ವಾಸುದೇವ ಕಂತುಜನಕ ಕೊಟ್ಟು ಎನಗೆ ಅಂತರಂಗದ ಸೇವೆಯನ್ನು ಅಂತರವಿಲ್ಲದೆ ಪಾಲಿಸಯ್ಯ ಹೊಂತಕಾರಿ ಪುರಂದರವಿಠಲ