ಕೀರ್ತನೆ - 52     
 
ಬಾರಯ್ಯ ವೆಂಕಟರಮಣ ಭಕ್ತರ ನಿಧಿಯೆ ಬಾರೋ ವಿಶ್ವಂಭರಣ ತೋರೋ ನಿನ್ನಯ ದಯೆ ತೋಯಜಾಂಬಕನೆ ವೇದಗೋಚರ ಬಾರೋ ಆದಿಕಚ್ಛಪ ಬಾರೋ ಮೋದಸೂಕರ ಬಾರೋ ಸದಯ ನರಸಿಂಹ ಬಾರೋ ವಾಮನ ಭಾರ್ಗವ ಬಾರೋ ರಾಮಕೃಷ್ಣನೆ ಬಾರೋ ಪ್ರೇಮದ ಬುದ್ದನೆ ಬಾರೋ ಸ್ವಾಮಿ ಕಲ್ಕಿಯೆ ಬಾರೋ ಅರವಿಂದನಾಭ ಬಾರೋ ಸುರರ ಪ್ರಭುವೆ ಬಾರೋ ಪುರುಹೂತವಂದ್ಯ ಬಾರೋ ಪುರಂದರವಿಠಲ ಬಾರೋ