ಕೀರ್ತನೆ - 64     
 
ಇವನ ಹಿಡಿದುಕೊಂಡು ಹೋಗೆಲೊ ಜೋಗಿ | ಇವ ನಮ್ಮ ಮಾತು ಕೇಳದೆ ಪುಂಡನಾದನು ಆಡುತಾಡುತ ಬಂದು ಮಡುವಿನೊಳ್ ಮುಳುಗಿದ | ಬೇಡವೆಂದರೆ ಬೆಟ್ಟ ಬೆನ್ನಲಿ ನೆಗಹಿದ || ಓಡುತೋಡುತ ಬಂದು ದಾಡೆಯಿಂದ ಸೀಳ್ವ | ನೋಡ ಹೋದರೆ ಕಣ್ಣ ತರೆದಂಜಿಸುವ ಹುಲ್ಲಲಿ ಬ್ರಾಹ್ಮಣನ ಕಣ್ಣು ಕುಕ್ಕಿದ ಬುದ್ಧಿ ॥ ಅಲ್ಲವೆಂದರೆ ಕೊಡಲಿಯ ಪಿಡಿದೆತ್ತಿದ || ಬಿಲ್ಲನು ಎಡದ ಕೈಯಿಂದಲಿ ಎತ್ತಿದ | ಬಲ್ಲಿದ ಮಾವನ ಶಿರವನರಿದು ಬಂದ ಬತ್ತಲೆ ಕುದುರೆಯ ಹತ್ತಬೇಡೆಂದರೆ | ಹತ್ತುವ ಶ್ರೀಕೃಷ್ಣ ಚೆಂದದಿಂದ || ಭಕ್ತವತ್ಸಲ ನಮ್ಮ ಪುರಂದರವಿಠಲನ । ಅತ್ತ ಹಿಡಿದು ಕೊಂಡು ಹೋಗಯ್ಯ ಜೋಗಿ