ಭಳಿಭಳಿರೆ ಎನ್ನ ಸುಖವೆಂಬುದೇ ಸುಖವು
ಹಲಕಾಲಕಿದೆ ಇರಲಿ ಕಾವೇರಿ ರಂಗ
ತಂದೆ ನೀನೇ ಕೃಷ್ಣ ತಾಯಿ ಇಂದಿರೆದೇವಿ
ಮಂದಜಾಸನನೆನಗೆ ಹಿರಿಯಣ್ಣನು |
ಇಂದು ಶ್ರೀ ಸರಸ್ವತೀದೇವಿ ಅತ್ತಿಗೆಯು
ಎಂದೆಂದಿಗೂ ವಾಯುದೇವರೇ ಗುರುವು
ಗುರುಪತ್ನಿ ಶ್ರೀಭಾರತಿಯು ನೋಡೆ ಮೇಲಾಗಿ
ಗರುಡಾಹಿ ರುದ್ರರಣ್ಣನ ಮಕ್ಕಳು ॥
ಸುರರು ಸನಕಾದಿಗಳು ಪರಮಬಾಂಧವರೆನಗೆ
ಸ್ಥಿರವಾದ ವೈಕುಂಠವೆನಗೆ ಮಂದಿರವು
ನಿನ್ನ ಪಾದಾಂಬುಜವ ಭಜಿಸುವುದೆ ಸೌಭಾಗ್ಯ
ನಿನ್ನ ನಿರ್ಮಾಲ್ಯಗಳೆ ಭೋಗದ್ರವ್ಯ ||
ನಿನ್ನ ಕಥೆ ಕೇಳುವುದೆ ಮಂಗಳಸುವಾದ್ಯಗಳು
ನಿನ್ನಂಥ ಅರಸೆನಗೆ ಪುರಂದರವಿಠಲ