ಶ್ರೀಪತಿಯು ನಮಗೆ ಸಂಪದವೀಯಲಿ ವಾ-
ಣೇಪತಿಯು ನಮಗೆ ದೀರ್ಘಾಯು ಕೊಡಲಿ
ಸುರರ ಗಣವನು ಪೊರೆಯೆ ವಿಷವ ಕಂಠದಲಿಟ್ಟ
ಹರ ನಿತ್ಯ ನಮಗೆ ಸಹಾಯಕನಾಗಲಿ ॥
ನರರೊಳುನ್ನತವಾದ ನಿತ್ಯಾಭೋಗಂಗಳನು
ಪುರುಹೂತ ಪೂರ್ಣ ಮಾಡಿಸಲಿ ನಮಗೆ
ವಿನುತಸಿದ್ಧಿಪ್ರದನು ವಿಘ್ನೇಶ ದಯದಿಂದ
ನೆನದ ಕಾರ್ಯಗಳೆಲ್ಲ ನೆರವೇರಿಸಲಿ ||
ದಿನ ದಿನದಿ ಅಶ್ವಿನಿಗಳಾಪತ್ತುಗಳ ಕಳೆದು
ಮನಕೆ ಹರುಷವನಿತ್ತು ಮನ್ನಿಸಲಿ ಬಿಡದೆ
ನಿರುತ ಸುಜ್ಞಾನವನು ಈವ ಮಧ್ವರಾಯ
ಗುರುಗಳಾಶೀರ್ವಾದ ನಮಗಾಗಲಿ ॥
ಪುರಂದರ ವಿಠಲನ ಕರುಣದಿಂದಲಿ ಸಕಲ
ಸುರರೊಲುಮೆ ನಮಗೆ ಸುಸ್ಥಿರವಾಗಲಿ
Music
Courtesy:
ಸ್ಥಲ -
ಕೀರ್ತನೆ
ವಿಷಯ -
ತಾರತಮ್ಯೋಕ್ತ ಪದಗಳು