ಸೇವಕತನದ ರುಚಿಯೇನಳೆದೆಯೋ |
ದೇವ ಹನುಮರಾಯ ನೀ ವೈರಾಗ್ಯ ಬೇಡಿ
ಉದಧಿಯ ದಾಟಿ ಸೀತೆಯ ಕಂಡು ಬಂದಾಗ
ಮದುವೆಯ ಮಾಡೆನ್ನಬಾರದಿತ್ತೆ ॥
ಪದದಿ ಪಾಷಾಣವ ಪೆಣ್ಣ ಮಾಡಿದನಿಗೆ
ಇದು ಏನಾಶ್ಚರ್ಯವೊ ನೀ ಬಯಸಲೊಲ್ಲದೆ
ಕ್ಷಣದೊಳು ಸಂಜೀವನ ಗಿರಿ ತಂದಾಗ
ಧನವನು ಬೇಡಲು ಕೊಡದಿಹನೇ ||
ವಿನಯದ ವಿಭೀಷಣಗೆ ರಾಜ್ಯಪದವನಿತ್ತ
ವನಿಗೆನಾಶ್ಚರ್ಯವೊ ಹನುಮ ನೀನೊಲ್ಲದೆ
ಸಾರ್ವಭೌಮನು ತಾನೆ ಮೆಚ್ಚಿ ಬಂದಾಗಲೆ
ಉರ್ವಿಯ ಬೇಡಲು ಕೊಡದಿಹನೇ
ಸರ್ವವ ತೊರೆದು ಶ್ರೀ ಪುರಂದರವಿಠಲನ
ನಿರ್ವ್ಯಾಜ ಭಕುತಿಯ ಬೇಡಿಕೊಂಡೆಯಲ್ಲದೆ
Music
Courtesy:
ಸ್ಥಲ -
ಕೀರ್ತನೆ
ವಿಷಯ -
ಹನುಮ-ಭೀಮ-ಮಧ್ವರು