ಆಗಲೆ ಕಾಯಬೇಕು ಅಂಬುಜಾಕ್ಷನೆ ಎನ್ನ ।
ಈಗ ನೀ ಕಾಯ್ದರೇನು ಕಾಯದಿದ್ದರೇನು
ಹೊನ್ನು ಹಣ ಎನಗುಂಟು ಹೆಸರಾದ ಮನೆಯುಂಟು |
ಚಿನ್ನ-ಚೀನಾಂಬರವುಂಟು ಚೆಲುವುಪ್ಪರಿಗೆಯುಂಟು ॥
ಮೊನ್ನೆ ಹುಟ್ಟಿದ ಗಂಡು ಮಗು ಒಂದು ಎನಗುಂಟು |
ಸನ್ನೆ ಶಕ್ತಿಗುಂದಿದಾಗ ಸಂಗಡಲೊಬ್ಬರ ಕಾಣೆ
ನಂಟರಿಷ್ಟರು ಉಂಟು ನೆರೆ-ಹೊರೆ ಎನಗುಂಟು |
ಎಂಟು ಭಾಗ್ಯಗಳುಂಟು ಬಂದು ಹೋಗುವರುಂಟು |
ಕಂಠಕೆ ಹೊದ್ದಿದ ಕಾಂತೆಯರೆನಗುಂಟು |
ಒಂಟಿಯಾಗಿ ಹೋಗುವಾಗ ಸಂಗಡೊಬ್ಬರನು ಕಾಣೆ
ಒಂದು ಕ್ಷಣ ಮೊದಲಾದ ವಾತ ಘಾತಗಳಿಂದ |
ಅಂದಿನ ವ್ಯಾಧಿಗಳು ಬಾಧಿಸುತಿರಲು ||
ಇಂದಿರೇಶನೆ ನಿನ್ನ ಸಂಗವೆಲ್ಲವಿ ಬಿಟ್ಟೆ ।
ಬಂದಿನ್ನು ಕಾಯಬೇಕೊ ಪುರಂದರವಿಠಲ