ಕೀರ್ತನೆ - 245     
 
ಏಕೆ ನಿರ್ದಯನಾದೆ ಎಲೋ ದೇವನೇ ಶ್ರೀಕಾಂತ ಎನ್ನ ಮೇಲೆ ಎಳ್ಳಷ್ಟು ದಯವಿಲ್ಲ ಕಂಗೆಟ್ಟು ಕಂಬವನು ಒಡೆದು ಬಯಲಿಗೆ ಬಂದು ಹಿಂಗದೆ ಪ್ರಹ್ಲಾದನಪ್ಪಿಕೊಂಡೆ | ಮಂಗಳ ಪದವಿತ್ತು ಮನ್ನಿಸಿದೆ ಅವ ನಿನಗೆ ಬಂಗಾರವೆಷ್ಟು ಕೊಟ್ಟನು ಹೇಳೋ ಹರಿಯೇ ಸಿರಿಗೆ ಪೇಳದೆ ಮುನ್ನ ಸೆರಗ ಸಂವರಿಸದೆ ಗರುಡನ ಮೇಲೆ ಗಮನವಾಗದೆ | ಭರದಿಂದ ನೀ ಬಂದು ಕರಿಯನುದ್ಧರಿಸಿದೆ ಕರಿರಾಜನೇನು ಕೊಟ್ಟನು ಹೇಳು ಹರಿಯೇ ಅಜಮಿಳನು ಅಣ್ಣನೆ ವಿಭೀಷಣನು ತಮ್ಮನೆ ನಿಜದಿ ರುಕ್ಮಾಂಗದ ಮೊಮ್ಮಗನೆ ॥ ಭಜನೆಗೈವರೆ ಹಿತರೆ ನಾ ನಿನಗನ್ಯನೆ ತ್ರಿಜಗಪತಿ ಸಲಹೆನ್ನ ಪುರಂದರ ವಿಠಲ