ಕೀರ್ತನೆ - 252     
 
ಏನು ಬರೆದೆಯೊ ಬ್ರಹ್ಮ ಎಂತು ನಿರ್ದಯನು-ಅಭಿ | ಮಾನವನು ತೊರೆದು ಪರರನು ಪೀಡಿಸುವುದ ಬಲ್ಲಿದರ ಮನೆಯ ಬಾಗಿಲ ಕಾಯ್ದು ಬೇಸತ್ತು । ಸೊಲ್ಲು ಸೊಲ್ಲಿಗೆ ಅವರ ಕೊಂಡಾಡುತ ॥ ಇಲ್ಲ ಈ ವೇಳೆಯಲಿ ನಾಳೆ ಬಾ-ಎನಲಾಗಿ | ಅಲ್ಲವನೆ ತಿಂದ ಇಲಿಯಂತೆ ಬಳಲುವುದ ಗೇಣೊಡಲ ಹೊರೆವುದಕೆ ಹೋಗಿ ನರರೊಳು ಪಂಚ-| ಬಾಣ ಸಮರೂಪ ನೀನೆಂದು ಪೊಗಳೆ || ಮಾಣು ಎನ್ನಾಣೆ ನೀ ನಾಳೆ ಬಾ ಎಂದೆನಲು । ಗಾಣ ತಿರುಗುವ ಎತ್ತಿನಂತೆ ಬಳಲುವುದ ಹಿಂದೆ ಬರೆದಾ ಬರೆಹ ಏನಾದರಾಗಲಿ | ಮುಂದೆನ್ನ ವಂಶದಲಿ ಪುಟ್ಟುವರಿಗೆ ॥ ಸಂದೇಹ ಬೇಡ ಶ್ರೀ ಪುರಂದರ ವಿಠಲನೇ । ಕಂದರ್ಪನಯ್ಯ ಉಡುಪಿಯ ಕೃಷ್ಣರಾಯ