ಕೀರ್ತನೆ - 256     
 
ಕಂಡು ಕಂಡು ನೀ ಎನ್ನ ಕೈ ಬಿಡುವರೆ ಕೃಷ್ಣ ಪುಂಡರೀಕಾಕ್ಷ ಪುರುಷೋತ್ತಮ ಹರೇ ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ ನಿಂದೆಯಲಿ ನೊಂದೆನಯ್ಯ ನೀರಜಾಕ್ಷ | ತಂದೆ ತಾಯಿಯು ನೀನೇ ಬಂಧು ಬಳಗವು ನೀನೇ ಎಂದೆಂದಿಗೂ ನಿನ್ನ ನಂಬಿದೆನೊ ಕೃಷ್ಣಾ ಕ್ಷಣವೊಂದು ಯುಗವಾಗಿ ತೃಣವು ಪರ್ವತವಾಗಿ ಎಣಿಸಲಳವಲ್ಲ ಈ ಭವದ ವ್ಯಥೆಯ || ಸನಕಾದಿ ಮುನಿವಂದ್ಯ ವನಜಸಂಭವನಯ್ಯ ಫಣಿಶಾಯಿ ಪ್ರಹ್ಲಾದಗೊಲಿದ ನರಹರಿಯೆ ಭಕ್ತವತ್ಸಲನೆಂಬ ಬಿರುದು ಬೇಕಾದರೆ ಭಕ್ತರ ಅಧೀನನಾಗಿ ಇರಬೇಡವೆ । ಮುಕ್ತಿದಾಯಕ ದೇವ ಹೊನ್ನೂರ ಪುರವಾಸ ಶಕ್ತ ಪುರಂದರ ವಿಠಲ ಶ್ರೀ ಕೃಷ್ಣಾ