ಕೀರ್ತನೆ - 275     
 
ತಲ್ಲಣಿಸದಿರು ಕಂಡ್ಯ ತಾಳು ಮನವೆ ಸ್ವಾಮಿ ನಿಲ್ಲದಲೆ ರಕ್ಷಿಸುವ ಸಂದೇಹ ಬೇಡ ಬೆಟ್ಟದ ತುದಿಯಲ್ಲಿ ಬೆಳೆದ ವೃಕ್ಷಂಗಳಿಗೆ ಕಟ್ಟೆ ಕಟ್ಟುತ ನೀರ ಹೊಯ್ವರಾರು ಹುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾದ ಮೇಲೆ ಕೊಟ್ಟು ರಕ್ಷಿಸುವನು ಇದಕೆ ಸಂದೇಹ ಬೇಡ ಅಡವಿಯೊಳಗಾಡುವ ಮೃಗಜಾತಿ ಪಕ್ಷಿಗಳಿಗೆ ಅಡಿಗಡಿಗೆ ಆಹಾರವಿತ್ತವರದಾರು ಪಡೆದ ಜನಿನಿಯಂತೆ ಸಾರಥಿಯಾಗಿ ತಾ ಬಿಡದೆ ರಕ್ಷಿಸುವನು ಇದಕೆ ಸಂದೇಹಬೇಡ ಕಲ್ಲೊಳಗೆ ಪುಟ್ಟಿ ಕೂಗುವ ಮಂಡೂಕಂಗಳಿಗೆ ಅಲ್ಲಿ ಹೋಗಿ ಆಹಾರವಿತ್ತವರದಾರು ಬಲ್ಲಿದನು ಪುರಂದರವಿಠಲರಾಯ ನಿಲ್ಲದೇ ರಕ್ಷಿಪನು ಇದಕೆ ಸಂದೇಹಬೇಡ