ನಾ ನಿನಗೇನ ಬೇಡುವುದಿಲ್ಲ -
ಎನ್ನ ಹೃದಯಕಮಲದೊಳು ನೆಲಸಿರು ಹರಿಯೆ
ಶಿರ ನಿನ್ನ ಚರಣಕೆರಗಲಿ -ಚಕ್ಷು
ಎರಕದಿಂದಲಿ ನಿನ್ನ ನೋಡಲಿ ಹರಿಯೆ ॥
ನಿರುಮಾಲ್ಯ ನಾಸ ಫ್ರಾಣಿಸಲಿ -ಎನ್ನ
ಕರಣ ಗೀತಂಗಳ ಕೇಳಲಿ ಹರಿಯೆ
ನಾಲಿಗೆ ನಿನ್ನ ಕೊಂಡಾಡಲಿ ಎನ್ನ
ತೋಳು ಕರಂಗಳ ಮುಗಿಯಲಿ ಹರಿಯೆ ||
ಕಾಲು ತೀರ್ಥಯಾತ್ರೆಗೆ ಪೋಗಲಿ -ಮನ
ಓಲೈಸಿ ನಿನ್ನನು ಸ್ಮರಿಸಲಿ ಹರಿಯೆ
ಚಿತ್ತ ನಿನ್ನೊಳು ಮುಳುಗಾಡಲಿ -ನಿನ್ನ
ಭಕ್ತ ಜನರ ಸಂಗ ದೊರಕಲಿ ಹರಿಯೆ |
ತತ್ತ್ವಯೋಗಾಭ್ಯಾಸಕ್ಕಾಗಲಿ -ಉಕ್ಕಿ
ಸತ್ಯ ಮೂರುತಿ ನಮ್ಮ ಪುರಂದರ ವಿಠಲ
Music
Courtesy:
ಸ್ಥಲ -
ಕೀರ್ತನೆ
ವಿಷಯ -
ಆತ್ಮ ನಿವೇದನೆ