ಕೀರ್ತನೆ - 295     
 
ನಾ ಮಾಡಿದ ಕರ್ಮ ಬಲವಂತವಾದರೆ | ನೀ ಮಾಡುವುದೇನೊ ದೇವಾ. ಸಾಮಾನ್ಯವಲ್ಲವಿದು ಬ್ರಹ್ಮಬರೆದ ಬರೆಹ । ನೇಮದಿಂದಲಿ ಎನ್ನ ಹಣೆಯಲ್ಲಿ ಬರೆದುದಕೆ ಅತಿಥಿಗಳಿಗೆ ಅನ್ನ ಕೊಟ್ಟವನಲ್ಲ ಪರ - | ಸತಿಯರ ಸಂಗವ ಗಳಿಗೆ ಬಿಟ್ಟವನಲ್ಲ || ಮತಿಹೀನನಾಗಿ ಮರುಳಾಗಿದ್ದೆನೋ ದೇವ | ಗತಿ ಯಾವುದೈ ಎನಗೆ ಗರುಡವಾಹನ ಕೃಷ್ಣ ಅನ್ನಪಾನಂಗಳಿಗೆ ಅಗ್ರಗಣ್ಯನು ಆಗಿ । ಸ್ನಾನ ಸಂಧ್ಯಾದಿ ಕರ್ಮಂಗಳ ನೀಗಿ || ದಾನವಾಂತಕ ನಿನ್ನ ಧ್ಯಾನವ ಮಾಡದೆ | ಶ್ವಾನನಂತೆ ಮನೆಮನೆ ತಿರುಗುತಲಿದ್ದೆ ಇನ್ನಾದರು ನಿನ್ನ ದಾಸ ಸಂಗವನಿತ್ತು | ಮನ್ನಿಸಿ ದಯಮಾಡೊ ಮನ್ಮಥಜನಕ | ಅನ್ಯರೊಬ್ಬರ ಕಾಣೆ ಆದರಿಸುವರಿಲ್ಲ | ಪನ್ನಂಗಶಯನ ಶ್ರೀಪುರಂದರವಿಠಲ