ಬದುಕಿದೆನು ಬದುಕಿದೆನು ಭವದುರಿತ ಹಿಂಗಿತು
ಪದುಮನಾಭನ ಪಾದದೊಲಿಮೆ ಎನಗಾಯಿತು
ಹರಿಯ ತೀರ್ಥ ಪ್ರಸಾದವು ಎನಗೆ ದೊರಕಿತು |
ಹರಿಕಥಾಮೃತವೆನ್ನ ಕಿವಿಗೊದಗಿತು
ಹರಿದಾಸರುಗಳೆನ್ನ ಬಂಧುಬಳಗವಾದರು |
ಹರಿಯ ಶ್ರೀ ಮುದ್ರೆಯೆನಗೆ ಆಭರಣವಾಯ್ತು
ಮುಕ್ತರಾದರು ಎನ್ನ ನೂರೊಂದು ಕುಲದವರು |
ಮುಕ್ತಿ ಮಾರ್ಗಕೆ ಯೋಗ್ಯ ನಾನಾದೆನು ॥
ಸುಕೃತಿ ದೇಹಕ್ಕೆನ್ನ ಮನವು ತಾನೆಳಸಿತ್ತು |
ಅಕಳಂಕ ಹರಿನಾಮ ದಿವ್ಯಕೊದಗಿತ್ತು
ಇಂದೆನ್ನ ಸಂತತಿಗೆ ಸಕಲ ಸಂಪದವಾಯ್ತು |
ಮುಂದೆನ್ನ ಜನ್ಮ ಸಾಫಲ್ಯವಾಯ್ತು ॥
ತಂದೆ ಶ್ರೀ ಹರಿ ಪುರಂದರವಿಠಲ ರಾಯನೇ ।
ಬಂದೆನ್ನ ಹೃದಯದೊಳು ನೆಲೆಯಾಗಿ ನಿಂತ
Music
Courtesy:
ಸ್ಥಲ -
ಕೀರ್ತನೆ
ವಿಷಯ -
ಆತ್ಮ ನಿವೇದನೆ