ಕೀರ್ತನೆ - 323     
 
ಮಾಯೆ ಎನ್ನ ಕಾಯವನ್ನುಪಾಯದಿಂದ ಮೋಹಿಸಿ । ಬಾಯ ಮುಚ್ಚಿ ಕೊಲ್ಲುತಿಹಳು ಕಾಯೊ ಲಕ್ಷ್ಮೀರಮಣನೆ ಮಾತೆ-ಪಿತರ ವಿಷಯದಿಂದ ಶ್ವೇತಬಿಂದು ಬೀಳಲಾಗಿ । ಕೀತ ತತ್ತಿ ಬಲಿದು ಮಾಸಚೀಲದೊಳಗೆ ಬೆಳೆದೆನು | ರಕ್ತಗೂಡಿ ಬಸಿರೊಳೊಂಬತ್ತು ತಿಂಗಳಿದ್ದೆ ನಾನು | ಸತ್ತು ಮತ್ತೆ ಹುಟ್ಟ ಹೋಗಲಾರೆ ಲಕ್ಷ್ಮೀರಮಣನೆ ಎಲುವು ಕಂಬಮಾಡಿ ನರದ ಬಳ್ಳಿಯಲ್ಲಿ ಬಿಗಿದು ಬಿಗಿದು | ಒಳಗೆ ರಕ್ತದಿಂದ ಮೆತ್ತಿ ಹೊಲೆ ಪಾಪದಿಂದ ನಿಂದೆ || ನೆಲೆಯ ಮನೆಯ ಮಾಡಿ ಚರ ಹೊದಿಕೆ ಹೊದಿಸಿದಂಥ | ಹೊಲೆಯ ಗೂಡಿನಲ್ಲಿ ಜನಿಸಲಾರೆ ಲಕ್ಷ್ಮೀರಮಣನೆ ಎನ್ನ ಸತಿಯು ಎನ್ನ ಸುತರು ಎನ್ನ ಬಂಧು ಬಳಗವು | ಎನ್ನ ಸಾಕಿ ಸಲಹು ಎಂದು ಹರಿದು ತಿಂಬರು || ಎನ್ನ ತನುವ ಜವನು ಬಂದು ಎಳೆದುಕೊಂಡು ಒಯ್ಯುವಾಗ | ಬೆನ್ನಬಪ್ಪರಾರ ಕಾಣೆ ಚೆನ್ನ ಲಕ್ಷ್ಮೀರಮಣನೇ ಇರುವೆ ಮೊದಲು ಆನೆ ಕಡೆಯು ಬಸಿರೊಳು ಬಂದೆ ನಾ । ಹರಿದು ಪಾಪಕರ್ಮದಿಂದೆ ತೊಪಳಲಿ ಬಳಲಿ ನೊಂದೆ ನಾ ॥ ಬಿರುಗಾಳಿಗೆ ಸಿಕ್ಕ ಮರದ ತರಗೆಲೆಯಂತುದುರಿ ನಾ | ಮರಳಿ ಮರಳಿ ಸತ್ತು ಹುಟ್ಟಲಾರೆ ಲಕ್ಷ್ಮೀರಮಣನೆ ಲಕ್ಷ ಜೀವರಾಶಿಗಳನು ಕುಕ್ಷಿಯೊಳಗೆ ಇರಿಸಿ ನಿನ್ನ | ಅಕ್ಷಯ - ಅನಂತ ನನ್ನನೇಕೆ ಹೊರಗೆ ಮಾಡಿದೆ || ಈಕ್ಷಿಸುತಿರು ಎನ್ನ ನೀನು ಕುಕ್ಷಿಯೊಳಗೆ ಇಂಬನಿತ್ತು | ರಕ್ಷಿಸಯ್ಯ ಲಕ್ಷ್ಮೀಪತಿ ಪುರಂದರ ವಿಠಲನೆ