ರಂಗಾ ಬಾರೋ ಪಾಂಡುರಂಗ ಬಾರೋ ಶ್ರೀ
ರಂಗಾ ಬಾರೋ ನರಸಿಂಗ ಬಾರೋ
ಕಂದ ಬಾರೋ ಎನ್ನ ತಂದೆ ಬಾರೋ
ಇಂದಿರಾ ರಮಣ ಮುಕುಂದ ಬಾರೋ
ಅಪ್ಪ ಬಾರೋ ತಿಮ್ಮಪ್ಪ ಬಾರೋ ಕಂ
ದರ್ಪನೈಯನೇ ಕಂಚಿವರದ ಬಾರೋ
ವಿಷ್ಣು ಬಾರೋ ಉಡುಪಿ ಕೃಷ್ಣ ಬಾರೋ
ಎನ್ನಿಷ್ಟ ಮೂರುತಿ ಪುರಂದರ ವಿಠಲ ಬಾರೋ
Music
Courtesy:
ಸ್ಥಲ -
ಕೀರ್ತನೆ
ವಿಷಯ -
ಆತ್ಮ ನಿವೇದನೆ