ಹರಿದಾಸರ ಸಂಗ ದೊರೆಯಿತು ಎನಗೀಗ ಇನ್ನೇನಿನ್ನೇನು
ವರಗುರು ಉಪದೇಶ ನೆರವಾಯ್ತು ಎನಗೀಗ ಇನ್ನೇನಿನ್ನೇನು
ಮಾಯದ ಸಂಸಾರ ಮಮಕಾರ ತಗ್ಗಿತು ಇನ್ನೇನಿನ್ನೇನು
ತೋಯಜಾಕ್ಷನ ನಾಮ ಜಿಹ್ವೆಯೊಳ್ನೆಲಸಿತು ಇನ್ನೇನಿನ್ನೇನು
ಹಲವು ದೈವಗಳೆಂಬ ಹಂಬಲ ಬಿಟ್ಟಿತು ಇನ್ನೇನಿನ್ನೇನು
ಜಲಜನಾಭನ ಧ್ಯಾನ ಹೃದಯದೊಳ್ನೆಲಸಿತು ಇನ್ನೇನಿನ್ನೇನು
ತಂದೆ ತಾಯೆ ಮುಚುಕುಂದವರದನಾದ ಇನ್ನೇನಿನ್ನೇನು
ಸಂದೇಹವಿಲ್ಲ ಮುಕುಂದ ದಯಮಾಡಿದ ಇನ್ನೇನಿನ್ನೇನು
ಏನೆಂದು ಹೇಳಲಿ ಆನಂದ ಸಂಭ್ರಮ ಇನ್ನೇನಿನ್ನೇನು
ಆ ನಂದಗೋಪನ ಕಂದನ ಮಹಿಮೆಯ ಇನ್ನೇನಿನ್ನೇನು
ಎನ್ನವಂಶಗಳೆಲ್ಲ ಪಾವನವಾದುವು ಇನ್ನೇನಿನ್ನೇನು
ಚಿನ್ಮಯ ಪುರಂದರವಿಠಲಯ್ಯ ದೊರಕಿದ ಇನ್ನೇನಿನ್ನೇನು
Music
Courtesy:
ಸ್ಥಲ -
ಕೀರ್ತನೆ
ವಿಷಯ -
ಆತ್ಮ ನಿವೇದನೆ