ಬಯಲಭಾವಿಯ ನೀರಿಗೆ ಬಂದಳೊಬ್ಬಳು ಬಾಲೆ !
ಬಾಯಾರಿ ಬಿದ್ದಳು ಕೊಡವೊಡೆಯಿತು ನೀರುರುಳಿತು
ನೀರಿಲ್ಲದೆ ನೆರಳಿಲ್ಲದೆ ಬೇರಿಲ್ಲದೆ ಸಸಿಹುಟ್ಟಿ
ಹೂವಿಲ್ಲದೆ ಕಾಯಿಲ್ಲದೆ ಅದು ಫಲಕೆ ಬಂದು ॥
ಕರವಿಲ್ಲದೆ ಕಾಲಿಲ್ಲದೆ ಕೊಯ್ವರಯ್ವರು ಆ ಹಣ್ಣನು |
ಮರುಳಾಯಿತು ಮೂವತ್ತು ಸಾವಿರ ಮಂದಿ
ಕುರುಡ ಕಂಡನು ಸರ್ಪನಡುವಿರುಳು ಬಾಹುದನು |
ಮೂಕ ಕಂಡನು ಕನಸ ಕಿವುಡನು ಕೇಳಿದ ||
ಇರವು ಹಾರಿತು ಗಗನಕೆ ಮರವು ಮುರಿಯಿತು ನೋಡಿ |
ವಿಧಿ ತನ್ನ ಬೇಟೆಗೆ ಹೋಗುವ ಸಡಗರ ನೋಡಿ
ಕಿಚ್ಚಿನ ಕೊಡದವಳೆ ನೀ ಬಂದೆ ತೋರಣಗಟ್ಟಿ |
ರಚ್ಚಿಗೆ ಬಾಹೋರು ನಾಲುವರೊಳಗೆ
ಉಚ್ಚರಿಸಲೂ ಸಲ್ಲ ಕೇಳು ಪುರುಷನ ಸೊಲ್ಲ
ಅಚ್ಚಪುರಂದರವಿಠಲ ತಾನೆ ಬಲ್ಲ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ತತ್ತ್ವ ವಿವೇಚನೆ