ಕೀರ್ತನೆ - 430     
 
ಶ್ರೀಪತಿಯು ನಮಗೆ ಸಂಪದವೀಯಲಿ - ವಾ ಣೀಪತಿಯು ನಮಗೆ ದೀರ್ಘಾಯು ಕೊಡಲಿ ಸುರರ ಗಣವನು ಪೊರೆಯೆ ವಿಷವ ಕಂಠದಲಿಟ್ಟ ಹರ ನಿತ್ಯ ನಮಗೆ ಸಹಾಯಕನಾಗಲಿ ಸುರರೊಳುನ್ನತವಾದ ನಿತ್ಯ ಭೋಗಂಗಳನು ಪುರುಹೂತ ಪೂರ್ಣಮಾಡಿಸಲಿ ನಮಗೆ ವಿನುತ ಸಿದ್ಧಿಪ್ರದನು ವಿಘ್ನೇಶ ದಯದಿಂದ ನೆನೆದ ಕಾರ್ಯಗಳೆಲ್ಲ ನೆರವೇರಿಸಲಿ ದಿನದಿನದಿ ಅಶ್ವಿನಿಗಳಾಪತ್ತುಗಳ ಕಳೆದು ಮನಕೆ ಹರುಷವನಿತ್ತು ಮನ್ನಿಸಲಿ ಬಿಡದೆ ನಿರುತ ಸುಜ್ಞಾನವನು ಈವ ಮಧ್ವರಾಯ | ಗುರುಗಳಾಶೀರ್ವಾದ ನಮಗಾಗಲಿ ಪುರಂದರವಿಠಲನ ಕರುಣದಿಂದಲಿ ಸಕಲ ಸುರರೊಲುಮೆ ನಮಗೆ ಸುಸ್ಥಿರವಾಗಲಿ