ಕೀರ್ತನೆ - 436     
 
ಸ್ನಾನ ಮಾಡಿರಯ್ಯ ಜ್ಞಾನತೀರ್ಥದಲಿ ನಾನು ನೀನೆಂಬಹಂಕಾರವ ಬಿಟ್ಟು ತನ್ನೊಳು ತಾನೆ ತಿಳಿದರೊಂದು ಸ್ನಾನ ಅನ್ಯಾಯಗಾರಿ ಕಳೆದರೊಂದು ಸ್ನಾನ ಅನ್ಯಾಯವಾಡದಿದ್ದರೊಂದು ಸ್ನಾನ ಚೆನ್ನಾಗಿ ಹರಿಯ ನೆನೆದರೊಂದು ಸ್ನಾನ ಪರಸತಿಯ ಬಯಸದಿದ್ದರೆ ಒಂದು ಸ್ನಾನ ಪರನಿಂದೆ ಮಾಡದಿದ್ದರೆ ಒಂದು ಸ್ನಾನ ಪರದ್ರವ್ಯ ಅಪಹರಿಸದಿರೆ ಒಂದು ಸ್ನಾನ ಪರತತ್ವ ತಿಳಿದುಕೊಂಡರೆ ಒಂದು ಸ್ನಾನ ತಂದೆತಾಯಿಗಳ ಸೇವೆ ಒಂದು ಸ್ನಾನ ಮುಂದಿನ ಮಾರ್ಗ ತಿಳಿದರೊಂದು ಸ್ನಾನ ಬಂಧನವನು ಬಿಡಿಸಿದರೊಂದು ಸ್ನಾನ ಸಂಧಿಸಿ ತಿಳಿದುಕೊಂಡರೆ ಸೇತು ಸ್ನಾನ ಅತ್ತೆ ಮಾವನ ಸೇವೆಯೊಂದು ಸ್ನಾನ ಭರ್ತನ ಮಾತು ಕೇಳುವುದೊಂದು ಸ್ನಾನ ಕ್ಷೇತ್ರಪಾತ್ರರ ಸಹವಾಸ ಒಂದು ಸ್ನಾನ ಪಾರ್ಥಸಾರಥಿ ನಿಮ್ಮ ಧ್ಯಾನವೆ ಸ್ನಾನ ವೇದಶಾಸ್ತ್ರಗಳನೋದಿದರೊಂದು ಸ್ನಾನ ಭೇದಾಭೇದ ತಿಳಿದರೊಂದು ಸ್ನಾನ ಸಾಧು ಸಜ್ಜನರ ಸಂಗ ಒಂದು ಸ್ನಾನ .ಪುರಂದರವಿಠಲನ ಧ್ಯಾನವೆ ಸ್ನಾನ