ಕೀರ್ತನೆ - 439     
 
ಹಣ್ಣು ಕೊಂಬುವ ಬನ್ನಿರಿ ಹರಿದಾಸರು ಹಣ್ಣು ಕೊಂಬುವ ಬನ್ನಿರಿ ಚೆನ್ನ ಬಾಲಕೃಷ್ಣನೆಂಬ ಕನ್ನೆಗೊನೆಬಾಳೆಹಣ್ಣು ಸುತ್ತೇಳು ಲೋಕದಿ ಸುರರು ಬಿತ್ತಿದ ಹಣ್ಣು ಭಕ್ತರ ಬಾಯೊಳು ನೆನೆವ ಹಣ್ಣು ಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆ ನಿತ್ಯ ಮಾಧವನೆಂಬ ಅಚ್ಚಮಾವಿನ ಹಣ್ಣು ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣು ನಿಜಮುನಿಗಳಿಗೆ ತೋರಿಸಿದ ಹಣ್ಣು ತ್ರಿಜಗವಂದಿತ ಪಾಲ್ಗಡಲೊಡೆಯನೆ ಹಣ್ಣು ಸುಜನಭಕ್ತರೆಲ್ಲ ಕೊಳ್ಳ ಬನ್ನಿರಿ ಹಣ್ಣು ತುರುವ ಕಾಯ್ದ ಹಣ್ಣು ಉರಗನ ತುಳಿದಾ ಹಣ್ಣು ಕರೆದರೆ ಕಂಬದೊಳು ಓಯೆಂಬ ಹಣ್ಣು ಮರುಗುವ ಧ್ರುವನಿಗೆ ಪಟ್ಟಗಟ್ಟಿದ ಹಣ್ಣು ಕರುಣಾಳು ಪುರಂದರವಿಠಲನ ಹಣ್ಣು