ಅಜ್ಞಾನಿಗಳ ಕೂಡ ಅಧಿಕ ಸ್ನೇಹಕ್ಕಿಂತ
ಸುಜ್ಞಾನಿಗಳ ಕೂಡ ಜಗಳವೇ ಲೇಸು
ಡಂಭಕರ ಮನೆಯಪಮಾನದೂಟಕ್ಕಿಂತ
ತುಂಬಿದ ಪಟ್ಟಣದಿ ತಿರಿದುಂಬುವುದೆ ಲೇಸು |
ಹಂಬಲಿಸಿ ಹಾಳು ಹರಟೆ ಹೊಡೆವುದಕಿಂತ
ನಂಬಿ ಹರಿದಾಸರೊಳಾಡುವುದೆ ಲೇಸು
ಒಡನೆ ಹಂಗಿಸುವರ ಮನೆಯ ಓಗರಕಿಂತ
ಕುಡಿನೀರ ಕುಡಿದುಕೊಂಡಿಹುದೆ ಲೇಸು |
ಬಿಡದೆ ಕಡಿದಾಡುವರ ನೆರೆಯಲಿಹುದಕಿಂತ
ಅಡವಿಯೊಳಜ್ಞಾತವಾಸವೇ ಲೇಸು
ಮಸೆದು ಮತ್ತರಿಸುವನ ಬಳಿಯಲಿಹುದಕಿಂತ
ಹಸನಾದ ಹಾಳುಗುಡಿಗಳೆ ಲೇಸು ।
ಬಿಸಜಾಕ್ಷ ಪುರಂದರವಿಠಲನ ನೆನೆನೆನೆದು
ವಸುಧೆಯೊಳು ಚಿರಕಾಲವಿರುವುದೆ ಲೇಸು
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ