ಆವನಾವನ ಕಾಯ್ದ ಅವನಿಯೊಳಗೆ
ದೇವದೇವೇಶ ಶ್ರೀಹರಿಯಲ್ಲದೆ
ಆವ ತಂದೆಯು ಸಲಹಿದನು ಪ್ರಹ್ಲಾದನ
ಆವ ತಾಯಿ ಸಲಹಿದಳು ಧ್ರುವರಾಯನ
ಆವ ಸುತ ಸಲಹಿದನು ಆ ಉಗ್ರಸೇನನ
ಜೀವರಿಗೆ ಪೋಷಕನು ಹರಿಯಲ್ಲದೆ
ಆವ ಬಂಧುವು ಸಲಹಿದನು ಗಜರಾಜನನು
ಆವ ಪತಿ ಕಾಯ್ದ ದ್ರೌಪದಿಯ ಮಾನ |
ಆವ ಸೋದರರು ಸಲಹಿದರು ವಿಭೀಷಣನ
ಜೀವರಿಗೆ ದಾತೃ ಶ್ರೀಹರಿಯಲ್ಲದೆ
ಆವನಾಧಾರ ಅಡವಿಯೊಳಿಪ್ಪ ಮೃಗಗಳಿಗೆ
ಆವ ರಕ್ಷಕ ಪಕ್ಷಿಜಾತಿಗಳಿಗೆ
ಆವ ಪೊಷಕನು ಗರ್ಭದಲ್ಲಿದ್ದ ಶಿಶುಗಳಿಗೆ
ದೇವ ಶ್ರೀ ಪುರಂದರವಿಠಲನಲ್ಲದಲೆ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ