ಈಸಬೇಕು ಇದ್ದು ಜಯಿಸಬೇಕು
ಹೇಸಿಕೆ ಸಂಸಾರದಲ್ಲಿ ಲೇಶ ಆಶೆ ಇಡದ ಹಾಗೆ
ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳು
ಸ್ವಾಮಿರಾಮನೆನುತ ಪಾಡಿ ಕಾಮಿತವ ಕೈಕೊಂಬರೆಲ್ಲ
ಗೇರು ಹಣ್ಣಿನಲ್ಲಿ ಬೀಜ ಸೇರಿದಂತೆ ಸಂಸಾರದಿ
ಮೀರಿ ಆಶೆ ಮಾಡದ ಹಾಗೆ ಧೀರ ಕೃಷ್ಣನ ನೆನೆಯುವರೆಲ್ಲ
ಮಾಂಸದಾಶೆಗೆ ಮತ್ಸವು ಸಿಲುಕಿ ಹಿಂಸೆ ಪಟ್ಟಪರಿಯೊಳು
ಮೋಸ ಹೋಗದೆ ಪುರಂದರವಿಠಲ ಜಗದೀಶನೆನುತ
ಕೊಂಡಾಡುವರೆಲ್ಲ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ