ಎಲೆ ಮನವೆ ನೀ ತಿಳಿ ಹರಿ ಸರ್ವೋತ್ತಮನೆಂದು |
ಸುಲಲಿತಾತ್ಮನ ಭಜಿಸಿ ಸುಖಿಯಾಗೊ ಮನವೆ
ಇಕ್ಷುದಂಡಗಳಿರಲು ಇಂಧನವ ಮೆಲಲೇಕೆ |
ಅಕ್ಷಯ ಪಾತ್ರೆಯಿರಲು ಹಸಿವೆಯೆನಲೇಕೆ !
ನಿಕ್ಷೇಪ ನಿಧಿಯಿರಲು ನಿರುತ ದಾರಿದ್ರ್ಯವೇಕೆ |
ಪಕ್ಷಿವಾಹನನಿರಲು ಪರದೈವವೇಕೆ
ಸುರಧೇನು ಕೈಸೇರಿ ಸುಖವಿಲ್ಲವೆನಲೇಕೆ |
ಗರುಡ ಮಂತ್ರವ ಜಪಿಸಿ ಗರಳಭಯವೇಕೆ |
ತರಣಿಕಿರಣಗಳಿರಲು ಹಲವು ಜ್ಯೋತಿಗಳೇಕೆ ।
ಮುರಹರನ ಪೂಜಿಸದೆ ಮುಂದುಗೆಡಲೇಕೇ
ಭಾವಶುದ್ಧಿಗಳಿರಲು ಬಯಲಡಂಬಕವೇಕೆ |
ದೇವತಾ ಸ್ತುತಿಯಿರದ ದೇಹವೇಕೆ |
ಆವಗಂ ಹರಿಯೆನದೆ ಅನ್ಯಚಿಂತೆಗಳೇಕೆ !
ದೇವ ಪುರಂದರವಿಠಲನಿರಲು ಭಯವೇಕೆ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ