ಕಲ್ಲುಸಕ್ಕರೆ ಕೊಳ್ಳಿರೊ - ನೀವೆಲ್ಲರು |
ಕಲ್ಲುಸಕ್ಕರೆ ಕೊಳ್ಳಿರೊ
ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು !
ಫುಲ್ಲನಾಭ ಕೃಷ್ಣನ ದಿವ್ಯನಾಮವೆಂಬ
ಎತ್ತ ಹೇರುವುದಲ್ಲ ಹೊತ್ತು ಮಾರುವುದಲ್ಲ |
ಒತ್ತೊತ್ತಿ ಗೋಣಿಯ ತುಂಬುವುದಲ್ಲ ||
ಎತ್ತ ಹೋದರು ಮತ್ತೆ ಸುಂಕವು ಇದಕಿಲ್ಲ |
ಹತ್ತೆಂಟು ಸಾವಿರಕೆ ಬೆಲೆಯಿಲ್ಲದಂತಹ
ನಷ್ಟಬೀಳುವುದಲ್ಲ ನಾಶವಾಗುವುದಲ್ಲ ।
ಕಟ್ಟಿ ಇಟ್ಟರೆ ಮತ್ತೆ ಕೆಡುವುದಲ್ಲ |
ಎಷ್ಟು ದಿನವಿಟ್ಟರೂ ಕೆಟ್ಟು ಹೋಗುವುದಲ್ಲ |
ಪಟ್ಟಣದೊಳಗೊಂದು ಲಾಭವೆನಿಸುವಂಥ
ಸಂತೆಪೇಟೆಗೆ ಹೋಗಿ ಶ್ರಮಪಡಿಸುವುದಲ್ಲ ।
ಎಂತು ಮಾರಿದರದಕಂತವಿಲ್ಲ |
ಸಂತತ ಪುರಂದರವಿಠಲನ ನಾಮವ ।
ಎಂತು ನೆನೆಯಲು ಪಾಪ ಪರಿಹಾರವಲ್ಲದೆ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ