ಕೀರ್ತನೆ - 515     
 
ಗೋವಿಂದ ನಮೋ ಗೋವಿಂದ ನಮೋ ಗೋವಿಂದ ನಾರಾಯಣ | ಗೋವರ್ಧನ ಗಿರಿಯೆತ್ತಿದ ಗೋವಿಂದ ನಮ್ಮ ರಕ್ಷಿಸೊ ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ 1 ಕರ್ತು ಯಮನವರೆಳೆದು ಒಯ್ಯಲು ಅರ್ಥ ಪುತ್ರರು ಕಾಯ್ವರೆ ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು 1 ಸಂಚಿತಾರ್ಥದ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು | ಬಿಡದೆ ಯಮನವರೆಳೆದು ಒಯ್ಯಲು ಎಡವಿ ಬಿದ್ದಿತು ನಾಲಗೆ ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು | ಪ್ರಾಣ ಹೋಗಲು ಮುಟ್ಟಲಂಜುವಳು ಜಾಣೆ ಕರೆದರೆ ಬಾರಳು ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು | ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು | ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರ ಸೀಳಿದ ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ