ತನುವ ನೀರೊಳಗದ್ದಿ ಫಲವೇನು
ಮನದಲ್ಲಿ ದೃಢಭಕುತಿ ಇಲ್ಲದ ಮನುಜನು
ಧಾನ ಧರ್ಮಗಳನು ಮಾಡುವುದೇ ಸ್ನಾನ
ಜ್ಞಾನ - ತತ್ತ್ವಂಗಳ ತಿಳಿಯುವುದೇ ಸ್ನಾನ
ಹೀನಪಾಪಂಗಳ ಬಿಡುವುದೆ ಸ್ನಾನ
ಧ್ಯಾನದಿ ಮಾಧವನ ನಂಬುವುದೆ ಸ್ನಾನ
ಗುರುಗಳ ಶ್ರೀಪಾದತೀರ್ಥವೆ ಸ್ನಾನ
ಹಿರಿಯರ ದರುಶನ ಮಾಡುವುದೆ ಸ್ನಾನ
ಕರೆದು ಅನ್ನವನು ಇಕ್ಕುವುದೊಂದು ಸ್ನಾನ
ಸಿರಿಹರಿಚರಣ ನಂಬುವುದೊಂದು ಸ್ನಾನ
ದುಷ್ಟರ ಸಂಗವ ಬಿಡುವುದೊಂದು ಸ್ನಾನ
ಕಷ್ಟಪಾಪಂಗಳನು ಹರಿವುದೆ ಸ್ನಾನ
ಸೃಷ್ಟಿಯೊಳಗೆ ಸಿರಿಪುರಂದರವಿಠಲನ
ಮುಟ್ಟಿಭಜಿಸಿ ಪುಣ್ಯ ಪಡೆವುದೇ ಸ್ನಾನ