ತಾಳಿಯ ಹರಿದು ಬಿಸಾಡೆ ನೀ
ಹೇಳಿದವರ ಮಾತ ಕೇಳೇ ಗೈಯ್ಯಾಳಿ
ಎಲ್ಲಮ್ಮ ಎಕಲಾತಿ ಉರಿಮಾರಿ ಉಡಚಮ್ಮ
ಖುಲ್ಲ ಮಹಿಷಾಸುರ ದೈವವೆಂದೆ
ಎಲ್ಲ ದೈವಗಳು ನಾಯಾಗಿ ಹರಿವಾಗ
ಕಳ್ಳದೇವರ ನೆಚ್ಚಿ ಕೆಡಬೇಡ ಮೂಳಿ
ಕೊರಳೊಳು ಕವಡಿಯ ಶಿರದಲಿ ಹಡಲಿಗೆ
ಕರದಲಿ ದೀವಟಿಗೆ ಉರಿಸುತಲಿ
ಉರಿವ ಪಂಜನೆ ಪಿಡಿದು ಉಧೋ ಉಧೋ ಎನುತಲಿ
ತಿರುಗಿದೆ ಕೇರಿಗುಂಟ ಮೂಳಿ
ಸಿಡಿಯ ಮುಳ್ಳನೆ ತಂದು ನಡುಬೆನ್ನಲೂರಿಕೊಂಡು
ಒಡೆಯ ಮಲ್ಲಣನೆಂದು ಜೋಲಾಡು
ಕಡುಹರಿ ಯಮದೂತರು ಬಂದು ಎಳೆವಾಗ
ಒಡೆಯ ಮೆಲ್ಲುಣ್ಣೆತ್ತು ಹೋದನೆ ಮೂಳಿ
ಗುಂಡಿಗೆ ಎಣ್ಣೆಯ ಎಡಗೈಯಲಿಟ್ಟು ಕೊಂಡು
ಗುಂಡಿಗೆ ತುಪ್ಪವ ಮುಂದಿಟ್ಟು ಕೊಂಡು
ಮಿಂಡೆ ಮೈಲಾರಿಯ ಖಂಡೆರಾಯನೆಂದು
ಕೆಂಡದ ಮೇಲೆ ರೊಟ್ಟಿಯ ಸುಟ್ಟು ಮೂಳಿ
ಹೊನ್ನುನಾಗರ ಮಾಡಿ ಬಣ್ಣಿಸಿ ಕಿವಿಗಿಟ್ಟು
ನನ್ನಯ್ಯ ನಾಗಪ್ಪ ಸಲುಹೆನ್ನುತ
ಚಿನ್ನನಾಗರ ಬಂದು ಓಡಾಡಿ ಕಡಿವಾಗ
ಹೊನ್ನನಾಗರ ಎತ್ತ ಹೋದನೆ ಮೂಳಿ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ