ನಾರಾಯಣ ಎನ್ನಬಾರದೆ – ನಿಮ್ಮ 1
ನಾಲಿಗೆಯೊಳು ಮುಳ್ಳು ಮುರಿದಿಹುದೇ ?
ವಾರಣಾಸಿಗೆ ಪೋಗಿ ದೂರ ಬಳಲಲೇಕೆ 1
ನೀರ ಕಾವಡಿಯನು ಪೊತ್ತು ತಿರುಗಲೇಕೆ ॥
ಊರೂರು ತಪ್ಪದೆ ದೇಶಾಂತರವೇಕೆ |
ದಾರಿಗೆ ಸಾಧನವಲ್ಲವೆ ಹರಿನಾಮ
ನಿತ್ಯ ಉಪವಾಸವಿದ್ದು ಹಸಿದು ಬಳಲಲೇಕೆ !
ಮತ್ತೆ ಚಳಿಯೊಳು ಗಂಗೆ ಮುಳಗಲೇಕೆ |
ಹಸ್ತವ ಪಿಡಿದು ಮಾಡುವ ಜಪ-ತಪವೇಕೆ
ಮುಕ್ತಿಗೆ ಸಾಧನವಲ್ಲವೇ ಹರಿನಾಮ
ಸತಿ ಸುತರನು ಬಿಟ್ಟು ಯತಿಗಳಾಶ್ರಮವೇಕೆ
ವ್ರತ ಕೃಚ್ಛ ನೇಮ ನಿಷ್ಠೆಗಳೇತಕೆ ॥
ಪೃಥಿವಿಯೊಳಗೆ ನಮ್ಮ ಪುರಂದರವಿಠಲನ |
ಅತಿ ಭಕುತಿಯಿಂದೊಮ್ಮೆ ನೆನೆದರೆ ಸಾಲದೆ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ