ಮನುಜ ಶರೀರವಿದೇನು ಸುಖ ಇದ
ನೆನೆದರೆ ಘೋರವಿದೇನು ಸುಖ
ಜನನ ಮರಣ ಮಲಕೂಪದಲ್ಲಿದ್ದು
ಅನುಭವಿಸುವುದು ಇದೇನು ಸುಖ
ತನುವಿದ್ದಾಗಲೇ ಹೃದಯದ ಶೌಚದ
ಸ್ತನಗಳನುಂಬುವುದೇನು ಸುಖ
ದಿನವು ಹಸಿವು ತೃಷೆ ಘನ ರೋಗಂಗಳ
ಅನುಭವಿಸುವುದು ಇದೇನು ಸುಖ
ನೆನೆಯಲು ನಿತ್ಯ ನೀರ್ಗುಳ್ಳೆಯಂತಿಪ್ಪ
ತನುಮಲಭಾಂಡವಿದೇನು ಸುಖ
ಪರಿಪರಿ ವಿಧದಲಿ ಪಾಪವ ಗಳಿಸುತ
ನರಕಕೆ ಬೀಳುವುದೇನು ಸುಖ
ಪುರಂದರವಿಠಲನ ಮನದಿ ನೆನೆದು ಸ
ದ್ಧರುಮದೊಳ್ ನಡೆದರೆ ಆಗ ಸುಖ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ