ಮಾನಭಂಗವ ಮಾಡಿ ಮೇಲುಪಚಾರವ
ಏನ ಮಾಡಿದರಲ್ಲಿ ಇರಬಾರದಯ್ಯ
ಕುಂದುಗಳನಾಡಿ ಕುಚೋದ್ಯಗಳನೆ ಮಾಡಿ
ಕಂದ ಬಾಯೆಂದು ಬಣ್ಣಿಸಿ ಕರೆಯಲು
ಹಿಂದೆ ಮುಮ್ಮೊಳೆಯಿಟ್ಟು ಮುಂದೆ ಬಣ್ಣಿಸಿ ಕರೆದು
ಮುಂದಲೆಯನು ಕೊಯ್ದು ಮಂಡೆಗೆ ಹೂವ ಮುಡಿಸಿದಂತೆ
ನಗಗೇಡು ಮಾಡಿ ನಾಲುವರೊಳಗೆ ಕೈಯ
ಮುಗಿವೆ ಬಾಯೆಂದು ಬಣ್ಣಿಸಿ ಕರೆಯಲು
ಮಿಗಿಲಾದ ವಸ್ತ್ರಭೂಷಣವಿತ್ತು ಮನ್ನಿಸಲು
ತುದಿಮೂಗ ಕೊಯ್ದು ಚಿನ್ನದ ಮೂಗನಿಟ್ಟಂತೆ
ಅರ್ಥ ಹೋದರೂ ಪ್ರಾಣ ಹೋದರೂ ಮಾನ
ವ್ಯರ್ಥವಾಗದ ಹಾಗೆ ಕಾಯಬೇಕು
ಕರ್ತೃ ಶ್ರೀಹರಿ ನಮ್ಮ ಪುರಂದರವಿಠಲನ
ಭಕ್ತರಿಲ್ಲದ ಸ್ಥಳ ಬಿಡಬೇಕು ಹರಿಯೆ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ