ಕೀರ್ತನೆ - 588     
 
ಮುಪ್ಪಿನ ಗಂಡನ ಒಲ್ಲೆನೆ | ತಪ್ಪದೆ ಪಡಿಪಾಟ ಪಡಲಾರೆನವ್ವ... ಉದಯದಲೇಳಬೇಕು ಉದಕ ಕಾಸಲು ಬೇಕು ! ಹದನಾಗಿ ಬಜೆಯನು ಅರೆದಿಡಬೇಕು | ಬದಿಯಲಿ ಎಲೆ ಅಡಿಕೆ ಕುಟ್ಟಿಡಬೇಕು | ಬಿದಿರಕೋಲು ತಂದು ಮುಂದಿಡಬೇಕು ಪಿತ್ತವೋಕರಿಕೆ ಮುದುಕರಿಗೆ ವಿಶೇಷವು | ಹೊತ್ತು ಹೊತ್ತಿಗೆ ಜೊಲ್ಲ ಚೆಲ್ಲಬೇಕು || ಮೆತ್ತನವೆರಡು ಮುದ್ದಿಯ ಮಾಡಲುಬೇಕು । ಒತ್ತೊತ್ತಿ ಕೂಗಿ ಕರೆಯಲುಬೇಕು... ಜಾಡಿ ಹಾಸಬೇಕು ನೋಡಿ ಬಾಡಬೇಕು | ಅಡಗಡಿಗೆ ಕಣ್ಣೀರ ಸುರಿಸಬೇಕು || ಒಡೆಯ ಶ್ರೀ ಪುರಂದರವಿಠಲನ ನೆನೆಯುತ | ಮಿಡಿಗೊಂಡು ಮೂಲೆಗೆ ಒರಗಬೇಕು