ವರಕವಿಗಳಿದ್ದಲ್ಲಿ ನರಕವಿಗಳ ಕೊಂಡಾಡಬಾರದು - ಇಂಥಾ
ಧರಣಿಯ ಕಲ್ಲಿಗೆ ಸ್ಥಿರವೆಂದು ಪೂಜೆಯಮಾಡಬಾರದು
ಅಡಿಹೋದ ಮಡಕಿಗೆ ಜೋಡಿಸಿ ಒಲೆಗುಂಡ ಹೂಡಬಾರದು
ಬಡತನ ಬಂದರೆ ನಂಟರ ಬಾಗಿಲ ಸೇರಬಾರದು
ಮಡದಿಯ ನುಡಿ ಕೇಳಿ ಬಡವರ ಜಗಳಕೆ
ಹೋಗಬಾರದು - ಬಹಳ
ಬಡತನ ಬಂದವಳ ಕೈಯಿಂದ ಅಡಿಗೆಯ ಉಣ್ಣಬಾರದು
ಪಾಪಿಗಳಿದ್ದಲ್ಲಿ ರೂಪದ ಒಡವೆಯ ತೋರಬಾರದು -ಕಡು
ಕೋಪಿಗಳಿದ್ದಲ್ಲಿ ಅನುಕೂಲ ಗೋಷ್ಠಿಮಾಡಬಾರದು
ಪರರ ನಿಂದಿಸಿ ಪರಬ್ರಹ್ಮ ರೂಪೇಂದ್ರನ ಜರೆಯಬಾರದು
ವರದ ಶ್ರೀ ಪುರಂದರವಿಠಲನ ಸ್ಮರಣೆಯ ಮರೆಯಬಾರದು
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಲೋಕನೀತಿ