ಕೀರ್ತನೆ - 634     
 
ಹರಿಯ ಚರಣವೆಂಬ ಸುರಧೇನುವನು ಗುರುಬೋಧೆಯೆಂಬ ಕಣ್ಣಿಯಲಿ ಕಟ್ಟಿರಯ್ಯ ಭಕುತಿಯೆಂಬ ಕರುವನೆ ಬಿಟ್ಟು ನಿರುತ ವಿ ರಕುತಿಯೆಂಬ ಚೆನ್ನದಳಿಯ ಹಾಕಿ | ಯುಕುತವಾದ ನಿತ್ಯಕಾಯ ಚರಿಗೆಯೊಳು ಮುಕುತಿನಾಮಾಮೃತ ಕರೆದುಕೊಳ್ಳಿರಯ್ಯ ಕಾಮ,ಕ್ರೋಧ,ಲೋಭ,ಮೋಹ ಮದ ಮತ್ಸರಗಳೆಂಬ ಹಮ್ಮೆಂಬ ಕುರುಳನೆ ತಾಳಿ ಹಾಕಿ ॥ ತಾಮಸ ಜ್ಞಾನಾಗ್ನಿ ಪುಟಗೈದು ಇಂದ್ರಿಯ ನೇಮದ ನೀರ ಬೆರಸಿ ಕಾಯಲಿಡಿರೊ ಶಾಂತಗುಣವೆಂಬ ಹದನರಿತು ಆರಿಸಿ ಮತ್ತೆ ಭ್ರಾಂತಮನ ಮಜ್ಜಿಗೆಯ ಹೆಪ್ಪನಿಕ್ಕಿ ॥ ಕಾಂತವಿಷ್ಣು ಮಾಯಾಮಂಥದಿ ಶೋಧಿಸಿ ಸಿ ದ್ಧಾಂತವೆಂಬ ಕಡೆಗೋಲ ನೇಣನೆ ಪಿಡಿದು ಪರಬೊಮ್ಮನೆನಿಪ ಬೆಣ್ಣೆಯ ಮುದ್ದಿಯನೆ ತೆಗೆದು ಶರಣಮಣಿಯೆಂಬ ತುಪ್ಪವನೆ ಕಾಯಿಸಿ ॥ ಮರಣವೆಂಬ ನೊರೆ ತೆಗೆದೊಗೆದು ಅಮೃತವ ನಿರುತ ಹೃದಯವೆಂಬ ಕೊಡವನೆ ತುಂಬಿರೊ ಅನವರತ ಹರಿಸ್ಮರಣೆಯೆಂಬ ಬೀಸೂರಿಗೆ ಅನುವಾಗಿ ಕುಳಿತುಂಡು ಸುಖದಿ ತೇಗಿ | ಚಿನುಮಯ ಚಿದಾನಂದ ಪುರಂದರವಿಠಲನ ಅನುದಿನ ನೆನೆನೆನೆದು ಸುಖಿಯಾಗಿರಯ್ಯ