ಫಲಾಹಾರವನು ಮಾಡೊ ಪರಮಪುರುಷ ಭೂ
ಲಲನೆ ಲಕ್ಷ್ಮೀ ಕಂದರ್ಪರ ಸಹಿತ
ಕದಳಿ ಕೆಂಬಾಳೆ ಕಿತ್ತಳೆ ಕಂಚಿ ಫಲಗಳು
ಬದರಿ ಬೆಳುವಲ ಜಂಬೀರ ದ್ರಾಕ್ಷಿಗಳು |
ಮಧುರದ ಮಾದಾಳ ಮಾವಿನ ಹಣ್ಗಳು
ತುದಿ ಮೊದಲಿಲ್ಲದ ಪರಿಪರಿ ಫಲಗಳ
ಉತ್ತತ್ತಿ ಜಂಬು ನಾರಂಗ ದಾಳಿಂಬವು
ಮುತ್ತಾದೌದುಂಬರ ಕಾರಿಯು ಕವಳಿ ||
ಕತ್ತರಿಸಿದ ಕಬ್ಬು ಪಲಸು ತೆಂಗಿನಕಾಯಿ
ಒತ್ತಿದ ಬೇಳೆ ನೆಲಗಡಲೆ ಖರ್ಜೂರ ಹಣ್ಣ
ಹಾಲು ಸಕ್ಕರೆ ಜೇನುತುಪ್ಪ ಸೀಕರಣೆಯು
ಹಾಲು ರಸಾಯನ ಬೆಣ್ಣೆ ಸೀಯಾಳು ॥
ಮೂಲೋಕದೊಡೆಯ ಶ್ರೀ ಪುರಂದರವಿಠಲನೆ
ಪಾಲಿಸೋ ನಿನ್ನಯ ಕರಕಂಜದಿಂದಲಿ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಸಂಪ್ರದಾಯದ ಹಾಡುಗಳು