ಮನ್ನಾರು ಕೃಷ್ಣಗೆ ಮಂಗಳ ಜಗವ
ಮನ್ನಿಸಿದೊಡೆಯಗೆ ಮಂಗಳ
ಬೊಮ್ಮನ ಪಡೆದಗೆ ಭಕ್ತರುದ್ಧಾರಿಗೆ
ಕಮ್ಮಗೋಲನಯ್ಯಗೆ ಮಂಗಳ |
ಧರ್ಮಸಂರಕ್ಷಣೆ ದಾನವ ಶಿಕ್ಷಗೆ
ನಮ್ಮ ರಕ್ಷಕನಿಗೆ ಮಂಗಳ
ತುರುಗಳ ಕಾಯ್ದಗೆ ಕರುಣಾಕರನಿಗೆ
ಗಿರಿಯನೆತ್ತಿದನಿಗೆ ಮಂಗಳ ||
ಪುರದ ತಿಮ್ಮಪ್ಪಗೆ ವಾರಿಜನಾಭಗೆ
ಹರಿಸರ್ವೋತ್ತಮನಿಗೆ ಮಂಗಳ
ದೇವಕಿ ದೇವಿಯ ತನಯಗೆಮಂಗಳ
ದೇವ ತಿಮ್ಮಪ್ಪಗೆ ಮಂಗಳ ||
ಮಾವನ ಕೊಂದು ಮಲ್ಲರ ಮಡುಹಿದ
ಪುರಂದರವಿಠಲಗೆ ಮಂಗಳ