ಲಾಲಿ ಲಾಲಿ ನಮ್ಮ ಹರಿಯೆ ಲಾಲಿ ಸುರ
ನರರಿಗೆ ಒಲಿದು ಕರುಣವ ಬೀರುವ ದೊರೆಯೆ ಲಾಲಿ
ರಾಮಲಾಲಿ ಮೇಘಶ್ಯಾಮ ಲಾಲಿ
ಮಾಮನೋಹರ ಅಮಿತ ಸದ್ಗುಣಧಾಮ ಲಾಲಿ
ಕೃಷ್ಣ ಲಾಲಿ ಸರ್ವೋತ್ಕೃಷ್ಟ ಲಾಲಿ
ದುಷ್ಟರ ಶಿಕ್ಷಿಸಿ ಶಿಷ್ಟರ ಪೊರೆವ ಸಂತುಷ್ಟ ಲಾಲಿ
ರಂಗ ಲಾಲಿ ಮಂಗಳಾಂಗ ಲಾಲಿ
ಗಂಗೆಯ ಪಡೆದ ತುಂಗ ಮಹಿಮ ನರಸಿಂಗ ಲಾಲಿ
ನಂದ ಲಾಲಿ ಗೋಪಿಕಂದ ಲಾಲಿ
ಮಂದರ ಗಿರಿಧರ ಮಧುಸೂದನ ಮುಕುಂದ ಲಾಲಿ
ಶೂರ ಲಾಲಿ ರಣಧೀರ ಲಾಲಿ
ಮಾರನಯ್ಯ ನಮ್ಮ ಪುರಂದರವಿಠಲ ಲಾಲಿ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ಸಂಪ್ರದಾಯದ ಹಾಡುಗಳು