ಮರವನು ನುಂಗುವ ಪಕ್ಷಿ ಮನೆಯೊಳಗೆ ಬಂದಿದೆ
ಒಂಟಿ ಕೊಂಬಿನ ಪಕ್ಷಿ ಒಳಗೆ ಕರುಳಿಲ್ಲ
ಗಂಟಲು ಮೂರುಂಟು ಮೂಗು ಇಲ್ಲ
ಕುಂಟು ಮನುಜನಂತೆ ಕುಳಿತಿಹುದು ಮನೆಯೊಳಗೆ
ಎಂಟು ಹತ್ತರ ಭಕ್ಷ ಭಕ್ಷಿಸುವುದು
ನಡುವೆ ತಲೆಯೆಂಬುವದು ನಡು ನೆತ್ತಿಯಲಿ ಬಾಯಿ
ಕಡು ಸ್ವರಗಳಿಂದ ಗಾನ ಮಾಡ್ವದು
ಅಡವಿಯಲಿ ಹುಟ್ಟುವುದು ಅಂಗವೆರಡಾಗುವುದು
ಬಡತನ ಬಂದರೆ ಬಹಳ ರಕ್ಷಿಪುದು
ಕಂಜವದನೆಯರ ಕರದಲ್ಲಿ ನಲಿದಾಡುವುದು
ಎಂಜಲನುಣಿಸುವುದು ಮೂರ್ಜಗಕೆ
ರಂಜಿಪ ಶಿಖಾಮಣಿ ಸಿಂಹಾಸನದ ಮೇಲಿಪ್ಪ
ಸಂಜೀವ ಪಿತ ಪುರಂದರವಿಠಲನೇ ಬಲ್ಲ
Music
Courtesy:
ಸ್ಥಲ -
ಕೀರ್ತನೆಗಳು
ವಿಷಯ -
ವಿಶೇಷ