ಕೀರ್ತನೆ - 699     
 
ಮಹಾದಾದಿದೇವ ನಮೋ ಮಹಾಮಹಿಮನೆ. ನಮೋ ಪ್ರಹಲ್ಲಾದವರದ ಅಹೋಬಲ ನರಸಿಂಹ ತರಣಿಗುಬ್ಬಸವಾಗೆ ತಾರಾಪತಿಯು ನಡುಗೆ ಸುರರು ಕಂಗೆಟ್ಟೋಡೆ ನಭವ ಬಿಟ್ಟು ॥ ತರುಗಿರಿಗಳಲ್ಲಾಡೆ ಶರಧಿಗಳು ಕುದಿದುಕ್ಕೆ ಉರಿಯನುಗುಳುತ ಉದ್ಭವಿಸಿದೆಯೊ ನರಸಿಂಹ ಸಿಡಿಲಂತೆ ಗರ್ಜಿಸುತೆ ಕುಡಿಯ ನಾಲಗೆ ಚಾಚಿ ಅಡಿಗಡಿಗೆ ಹುಂಕರಿಸಿ ಕಡುಕೋಪದಿಂದ || ಮುಡಿವಿಡಿದು ರಕ್ಕಸನ ಕೆಡವಿ ನಖದಿಂದೊತ್ತಿ ಬಿಡದೊಡಲ ಬಗೆದ ಕಡುಗಲಿ ನಾರಸಿಂಹ ಸರಸಿಜೋದ್ಭವ ಹರ ಪುರಂದರಾದಿ ಸಮಸ್ತ ಸುರರು ಅಂಬರದಿ ಪೂಮಳೆಗರೆಯಲು ಸಿರಿಸಹಿತ ಗರುಡಾದ್ರಿಯಲಿ ನಿಂತು ಭಕುತರನು ಕರುಣಿಸುವ ಪುರಂದರವಿಠಲ ನಾರಸಿಂಹ