ಕೀರ್ತನೆ - 709     
 
ವ್ಯಾಸರಾಯರ ಚರಣ ಕಮಲ ದರ್ಶನವೆನ- ಗೇಸು ಜನ್ಮದ ಸುಕೃತ ಫಲದಿ ದೊರಕಿತೊ, ಎನ್ನ ಸಾಸಿರ ಕುಲಕೋಟಿ ಪಾವನವಾಯಿತು- ಶ್ರೀಶನ ಭಜಿಸುವುದಕಧಿಕಾರಿ ನಾನಾದೆ ದೋಷರಹಿತನಾದ ಪುರಂದರವಿಠಲನ ದಾಸರ ಕರುಣವು ಎನ್ನ ಮೇಲೆ ಇರಲಾಗಿ