ಗುರು ಉಪದೇಶವಿಲ್ಲದ ಜ್ಞಾನವು
ಗುರು ಉಪದೇಶವಿಲ್ಲದ ಸ್ನಾನವು
ಗುರು ಉಪದೇಶವಿಲ್ಲದ ಧ್ಯಾನವು
ಗುರು ಉಪದೇಶವಿಲ್ಲದ ಜಪವು
ಗುರು ಉಪದೇಶವಿಲ್ಲದ ತಪವು
ಗುರು ಉಪದೇಶವಿಲ್ಲದ ಮಂತ್ರ
ಗುರು ಉಪದೇಶವಿಲ್ಲದ ತಂತ್ರ
ಉರಗನ ಉಪವಾಸದಂತೆ ಕಾಣಿರೋ,
ಗುರು ವ್ಯಾಸರಾಯರೆ ಕರುಣದಿಂದಲಿ ಎನಗೆ
ಪುರಂದರ ವಿಠಲನೇ ಪರನೆಂದರುಹಿ
ದುರಿತಭಯವನೆಲ್ಲ ಪರಿಹರಿಸಿದರಾಗಿ
ವರ ಮಹಾಮಂತ್ರ ಉಪದೇಶಿಸಿದರಾಗಿ