ಕೀರ್ತನೆ - 1359     
 
ಹರಿಶಂಕರರೊಳಗೆ ಉತ್ತಮರಾರೆಂದು | ಪರೀಕ್ಷಿಸಬೇಕೆಂದು ಆದಿಯ ಯುಗದಲ್ಲಿ | ಸರಸಿಜ ಸಂಭವ ಸುರಪತಿಯಾದಿ ಸುರರು | ಸಾರಂಗ ಪಿನಾಕಿಗಳಿಂದೆಚ್ಚಾಡಿರೆನಲು | ಹರಿ ಸಾರಂಗವನೆತ್ತಿದ ಏರಿಸಿದ ಶಂ ಕರ ನಿಶ್ಚೆಷ್ಟಿತನಾಗಿದ್ದ ಕಾಣಿರೊ 1 ಹರಿಯಾಡಿಸಲಾಡುವರಜ ಭವಾದಿಗಳು ಸಿರಿ ಪುರಂದರ ವಿಠಲನೆ ಸರ್ವೋತ್ತಮ ಕಾಣಿರೋ