ಕೀರ್ತನೆ - 1399     
 
ಉರುಗಂಜೆ ಸೆರೆಗಂಜೆ ಶರೀರದ ಭಯಕಂಜೆ ಹಾವಿಗಂಜೆ ಚೇಳಿಗಂಜೆ ಕತ್ತಿಯ ಧಾರೆಗಂಜೆ ಇನ್ನೊಂದಕ್ಕಂಜುವೆ ಇನ್ನೊಂದಕ್ಕಳುಕುವೆ ಪರಧನ ಪರಸತಿಗೆರಡಕ್ಕಂಜುವೆನಯ್ಯ ಹಿಂದೆ ಕೌರವ ರಾವಣರೇನಾಗಿ ಪೋದರು ಮುಂದೆ ಸಲಹೊ ಪುರಂದರ ವಿಠಲ.