ಕೀರ್ತನೆ - 1     
 
ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ ಕಮ್ಮಗೋಲನ ವೈರಿಸುತನಾದ ಸೊಂಡಿಲ ಹೆಮ್ಮೆಯ್ಯ ಗಣನಾಥನೆ ಅಮ್ಮಯ್ಯ ಅ ಮೋರೆ ಕಪ್ಪಿನ ಭಾವ ಮೊರದಗಲ ಕಿವಿಯುಳ್ಳ ಕೋರೆ ದಾಡೆಯವನ್ಯಾರಮ್ಮ ಮೂರು ಕಣ್ಣನ ಸುತ ಮುರಿದಿಟ್ಟ ಚಂದ್ರನ ಧೀರ ತಾ ಗಣನಾಥನೆ ಅಮ್ಮಯ್ಯ ಉಟ್ಟ ದಟ್ಟಿಯು ಮತ್ತೆ ಬಿಗಿದುಟ್ಟ ಚಲ್ಲಣದ ದಿಟ್ಟ ತಾನಿವನ್ಯಾರಮ್ಮ ಪಟ್ಟದ ರಾಣಿ ಪಾರ್ವತಿಯ ಕುಮಾರ ಹೊಟ್ಟೆಯ ಗಣನಾಥನೆ ಅಮ್ಮಯ್ಯ ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನ್ಯಾರಮ್ಮ ಲೇಸಾಗಿ ಸುಜನರ ಸಲಹುವ ನೆಲೆಯಾದಿ ಕೇಶವನ ದಾಸ ಕಾಣೆ ಅಮ್ಮಯ್ಯ