ಕೀರ್ತನೆ - 5     
 
ಆರು ಬದುಕಿದರಯ್ಯ ಹರಿ ನಿನ್ನ ನಂಬಿ ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ ಅ ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆ ಸುಲಭದಲಿ ಕೌರವರ ಮನೆಯ ಮುರಿದೆ ನೆಲನ ಬೇಡಲು ಪೋಗಿ ಬಲಿಯ ಭೂಮಿಗೆ ತುಳಿದೆ ಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನ ಸರಸದಿಂ ಮಗಳ ಗಂಡನ ಕೊಲಿಸಿದೆ ಮರುಳಿನಿಂದಲಿ ಪೋಗಿ ಬೃಗುಮುನಿಯ ಕಣ್ಣೊಡೆದೆ ಅರಿತು ನರಕಾಸುರನ ಹೆಂಡಿರನು ತಂದೆ ತಿರಿದುಂಬ ದಾಸರ ಕೈ ಕಪ್ಪ ಕೊಂಬ ಮರ್ಮ ತಿರುಮಲಾಚಾರ ಶ್ರೀಗುರುವೆ ಬಲ್ಲ ವರ ಕಾಗಿನೆಲೆಯಾದಿಕೇಶವನ ಭಜಿಸಿದರೆ ತಿರಿವೆನೆಂದರು ತಿರುಪೆ ಕೂಳ್ ಪುಟ್ಟದೈ ಕೃಷ್ಣ